ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪದ ಬೆನ್ನಲ್ಲೇ ರಾಜ್ಯದಲ್ಲಿ ಮುಂಬರುವ ಚುನಾವಣೆಗಳಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಚುನಾವಣೆಗಳಿಗೆ ಇನ್ಮುಂದೆ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಸುವಂತೆ ಚುನಾವಣೆ ಆಯೋಗಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಂದೆ ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಜಾರಿಗೆ ನಿಯಮಗಳನ್ನು ರೂಪಿಸಲು ಆಯೋಗಕ್ಕೆ ಸೂಕ್ತ ಶಿಫಾರಸ್ಸು ಮಾಡಲು ತೀರ್ಮಾನ ಕೈಗೊಂಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಇಲಾಖೆ ಸಚಿವ ಹೆಚ್.ಕೆ ಪಾಟೀಲ್ ಹೆಚ್‌ಕೆ ಪಾಟೀಲ್‌, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದೆ. ಈ ಕುರಿತು ಅನುಮೋದನೆ ನೀಡಲಾಗಿದೆ ಎಂದರು.

ಇತ್ತೀಚಿಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ. ಮತಗಳ್ಳತನ ಚರ್ಚೆ ಮಾತು ನಡೆದಿದೆ. ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ ಎಂದು ಹೆಚ್ ಕೆ ಪಾಟೀಲ್ ತಿಳಿಸಿದರು.

Read Also : ರಸ್ತೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಹೊಡೆದಾಟ..!

Share.
Leave A Reply