ಬಾಲಿವುಡ್‌ನ ಫೇಮಸ್ ಕಾಮಿಡಿಯನ್ ಕಪಿಲ್ ಶರ್ಮಾ ಅವರು ಇತ್ತೀಚೆಗೆ ಕೆನಡಾದ ಸರ್ರೆ ನಗರದಲ್ಲಿ ಓಪನ್ ಮಾಡಿರುವ ಕೆಫೆ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಅಪರಿಚಿತರಿಂದ ಕೆಫೆಯ ಕಟ್ಟಡದ ಮೇಲೆ ಹಲವು ಸುತ್ತಿನ ದಾಳಿ ಮಾಡಲಾಗಿದೆ.
ಕಾರಿನಲ್ಲಿ ಬಂದ ಆಗಂತುಕರು ಕೆಫೆ ಮೇಲೆ ದಾಳಿ ಮಾಡುತ್ತಿದ್ದಂತಯೇ ಕ್ಷಣದಲ್ಲೇ ಎಸ್ಕೇಪ್ ಆಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಸಿಬ್ಬಂದಿ, ಗ್ರಾಹಕರು ಸೇರಿದಂತೆ ಯಾರಿಗೂ ಏನು ಆಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಖಲಿಸ್ತಾನಿ ಟೆರರಿಸ್ಟ್‌ಗಳು ಹರ್ಜೀತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ.
ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಫೆಯ ಕಿಟಕಿಯ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಲಡ್ಡಿ ಭಯೋತ್ಪಾದನಾ ವಿರೋಧಿ ಸಂಸ್ಥೆ NIA ಯ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ. ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಯುತ್ತಿದೆ.
