Site icon BosstvKannada

ಕ್ಯಾಂಟರ್ ಡಿಕ್ಕಿ; ಸಾರಿಗೆ ಸಂಸ್ಥೆ ಸಿಬ್ಬಂದಿ ಬಲಿ

ಹಾಸನ: ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸಾರಿಗೆ ಸಂಸ್ಥೆಯ ಚೆಕ್ಕಿಂಗ್ ಇನ್ಸ್ ಪೆಕ್ಟರ್ ಬಲಿಯಾಗಿರುವ ಘಟನೆ ನಡೆದಿದೆ.

ಶಕುನಿಗೌಡ (57) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಆಲೂರು (Aluru) ತಾಲೂಕಿನ ಪಾಳ್ಯ ಹತ್ತಿರ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಾರಿಗೆ ಬಸ್‌‌ ತಡೆದು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವುದಕ್ಕಾಗಿ ಶಕುನಿಗೌಡ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕ್ಯಾಂಟರ್‌ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ವಾಹನ ನಿಲ್ಲಿಸದೆ ಚಾಲಕನು ವಾಹನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version