ಚಿಕ್ಕಬಳ್ಳಾಪುರ: ಕಾರೊಂದು ಸಾರಿಗೆ ಬಸ್(KSRTC Bus) ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ಈ ಘಟನೆ ದೇವನಹಳ್ಳಿಯ (Devanahalli) ರಾಣಿ ಕ್ರಾಸ್ ಹತ್ತಿರ ನಡೆದಿದೆ. ಕಾರು ಡಿವೈಡರ್ ಗೆ ಹಾರಿ ಎದುರು ಬರುತ್ತಿದ್ದ ಸಾರಿಗೆ ಬಸ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26), ಮೋಹನ್ (33) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ.

ಕಾರಿನಲ್ಲಿದ್ದ ಮೂವರೂ ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಆದರೆ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಾಣಿ ಕ್ರಾಸ್ ಬಳಿ ಡಿವೈಡರ್ ಹಾರಿ ಸಾರಿಗೆ ಬಸ್ ಗೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಿಂದಾಗಿ ಸಾರಿಗೆ ಬಸ್ ನಲ್ಲಿದ್ದ ಕೆಲವರು ಕೂಡ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Leave A Reply