Site icon BosstvKannada

ಮಾಜಿ ಸಚಿವ ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಬಳ್ಳಾರಿ: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತನ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿರುವ ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ವಿಶ್ವನಾಥ ಪಾತ್ರವಿದೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಆದರೆ, ಖಚಿತ ಮಾಹಿತಿ ಸಿಕ್ಕಿಲ್ಲ.

Exit mobile version