ಇಂದು ಸಿಇಟಿ ಫಲಿತಾಂಶ(CET Results 2025) ಪ್ರಕಟವಾಗಿದ್ದು, ರಾಜ್ಯಕ್ಕೆ ಈ ಯುವಕನೇ ಪ್ರಥಮ ಸ್ಥಾನ ಪಡೆದಿದ್ದಾನೆ. ಎಂಸಿ ಸುಧಾಕರ್ ಅವರು ಇಂದು ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನ ಪ್ರಕಟಿಸಿದ್ದಾರೆ.
ಎಂಜಿನಿಯರಿಂಗ್
ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ ಎರಡನೇ ರ್ಯಾಂಕ್ ಗಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ್ಯಾಂಕ್ ಗಳಿಸಿದ್ದಾರೆ.
ಅಗ್ರಿಕಲ್ಚರ್
ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ನರ್ಸಿಂಗ್
ಯಲಹಂಕ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಹೆಚ್ಎಸ್ಆರ್ ಲೇಔಟ್ನ ನ್ಯಾಷನಲ್ ಪಬ್ಲಿಕ್‌ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರಿನ ವಳಚ್ಚಿಲ್ನ ಎಕ್ಸ್ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ರ್ಯಾಂಕ್ ಗಳಿಸಿದ್ದಾರೆ.
Also Read: KCET 2025ರ ಫಲಿತಾಂಶ ಪ್ರಕಟ : ಇಲ್ಲಿದೆ ಅದರ ವಿವರ
ಪಶು ವೈದ್ಯಕೀಯ
ಯಲಹಂಕದ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಹೆಚ್ಎಸ್ಆರ್ ಲೇಔಟ್ನ ಆತ್ರೇಯ ನ್ಯಾಷನಲ್ ಪಬ್ಲಿಕ್‌ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಹಾಗೂ ಮಂಗಳೂರಿನ ವಳಚ್ಚಿಲ್ನ ಎಕ್ಸ್ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ರ್ಯಾಂಕ್ ಗಳಿಸಿದ್ದಾರೆ.
ಬಿ ಫಾರ್ಮ್ ಟಾಪರ್ಸ್
ಪ್ರಥಮ – ಆತ್ರೆಯಾ ವೆಂಕಟಚಲಂ
ದ್ವಿತೀಯ – ಭವೇಶ್ ಜಯಂತಿ
ತೃತೀಯ – ಹರೀಶ್ ರಾಜ್ .ಡಿ.ವಿ
ವೆಟರ್ನರಿ ಪ್ರಾಕ್ಟಿಕಲ್
ಪ್ರಥಮ – ರಕ್ಷಿತಾ.ವಿ.ಪಿ
ದ್ವಿತೀಯ – ನಂದನ್
ತೃತೀಯ – ಭುವನೇಶ್ವರಿ

