Site icon BosstvKannada

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ನ್ಯಾ.ಮೈಕಲ್ ಕುನ್ಹಾ ಸಮಿತಿಯ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.

ಈ ವೇಳೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧಾರಿಸಲಾಯಿತು. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವು ಕೇಸ್ ದಾಖಲಿಸುವ ನಿರ್ಧರಿಸಲಾಗಿದೆ. ಜು.1 ರಂದು ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣದ ತನಿಖಾ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು.

Exit mobile version