Site icon BosstvKannada

Chinnaswamy Stampede : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ʼಹೈʼಕಮಾಂಡ್‌ ಬುಲಾವ್‌!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ(Chinnaswamy Stampede) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರಿಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆಯಲಿದೆ.

ಇದರ ಬೆನ್ನಲ್ಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯದ ನಾಯಕರಿಗೆ ಬುಲಾವ್ ನೀಡಿದೆ. ಈ ಹಿನ್ನಲೆ ಇಂದು ಘಟನೆ ಬಗ್ಗೆ ಹೈಕಮಾಂಡ್‌ಗೆ ಸಂಪೂರ್ಣ ಮಾಹಿತಿ ನೀಡಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ದೆಹಲಿಗೆ ತೆರಳಿದ್ದಾರೆ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಜೊತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹಲ್‌ ಗಾಂಧಿ ಸಭೆ ನಡೆಸಿದ್ದಾರೆ. ಇನ್ನು ಸಭೆಯಲ್ಲಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗಿಯಾಗಿದ್ದಾರೆ.

ಇನ್ನು ಸಭೆಯಲ್ಲಿ ಕಾಲ್ತುಳಿತದಲ್ಲಿ ನಡೆದ ಘಟನೆ ಹಾಗೂ ಅದಕ್ಕೆ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರಿಸಲಿದ್ದಾರೆ. ಬಳಿಕ ತಪ್ಪಿತಸ್ಥ ಅಧಿಕಾರಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

Exit mobile version