ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stampede)ದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. 10 ಲಕ್ಷ ರೂಪಾಯಿ ಸಾಕಾಗಲ್ಲ. ಸರ್ಕಾರ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.

ಈ ದುರಂತದಲ್ಲಿ ಒಟ್ಟು 11 ಆರ್​ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ. ಇನ್ನು ಪ್ರಕರಣದ ತನಿಖೆಯನ್ನು ನಿವೃತ್ತ ಜಸ್ಟೀಸ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದೆ. ಇನ್ನು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ಎಫ್​ಐಆರ್​ಗಳ ವಿಚಾರಣೆಯನ್ನು ಸಿಐಡಿ ಕೈ ತಲುಪಿದೆ.

Share.
Leave A Reply