ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ದೊಡ್ಡ ಹೈಡ್ರಾಮವೇ ಸೃಷ್ಟಿಯಾಗಿದೆ. 2ನೇ ಮದುವೆಗೆ ಹಸೆಮಣೆ ಏರಲು ಸಿದ್ಧವಾಗಿದ್ದ ಪತಿರಾಯನಿಗೆ ಮಂಟಪದಲ್ಲೇ (Chitradurga Wedding Incident)ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ.
4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಕೈಹಿಡಿದಿದ್ದಳು. ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ.

ವರದಕ್ಷಿಣೆ ಆಸೆಗೆ ಮತ್ತೊಮ್ಮೆ ಹಸಣೆ ಏರಲು ಸಿದ್ಧವಾಗಿದ್ದ ಎಂದು ಹೇಳಲಾಗಿದೆ. ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಆ ಮೂಲಕ ಕಾರ್ತಿಕ್ ಪತ್ನಿ ತನುಜಾ ಕುಟುಂಬಸ್ಥರಿಂದ ಎರಡನೇ ಮದುವೆಗೆ ಬ್ರೇಕ್ ಬಿದ್ದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
