BosstvKannada

DDPI ಗಳಿಗೆ ಖಡಕ್‌ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ : ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಕಳೆದ ವರ್ಷಕ್ಕಿಂತ ಈ ವರ್ಷ SSLC ಫಲಿತಾಂಶ ಕಡಿಮೆ ಬಂದಿದೆ. ಈ ವರ್ಷದ SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು. ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲದ ನೆಪ ಹೇಳಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್‌ ಆಗಿ ಸೂಚನೆ ಕೊಟ್ಟು ಎಚ್ಚರಿಸಿದ್ದಾರೆ.

DDPIಗಳಿಗೆ ಸಿಎಂ ಸಿದ್ದರಾಮಯ್ಯ ಶಾಕ್!
ಡಿಸಿ ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ನೋಟಿಸ್​ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಸೂಚಿಸಿದ್ದಾರೆ.

ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಶಿಕ್ಷಕರು, ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಪರಿಶೀಲಿಸಿ, ಅವರು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರುತ್ತದೆ. ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ವಿಳಂಬ ಬೇಡ. ಹಣ ಬಿಡುಗಡೆ ಆಗಿದ್ದರೂ ಕೆಲವೆಡೆಶಾಲಾ ಕೊಠಡಿಗಳು ನಿರ್ಮಾಣವಾಗಿಲ್ಲ. ಈ ಬಗ್ಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

Also Read: chief officer! ಕೆಲಸ ಗಿಟ್ಟಿಸಿಕೊಂಡ ನಾಯಿ!

ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ
ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು ಹಾಗೂ ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ? ಈ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೋಪು, ಹಾಸ್ಟೆಲ್‌ ಸೌಲಭ್ಯ ಕೊಟ್ಟರೂ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ? ಈ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಿ. ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು. ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ..

Exit mobile version