Site icon BosstvKannada

ಬಿಹಾರ ಚುನಾವಣಾ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ.. ಮತಧಿಕಾರ ರ್ಯಾಲಿಯಲ್ಲಿ ಭಾಗಿ

ಬಿಹಾರದ ಚುನಾವಣಾ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಸದ್ಯ ಎಂಟ್ರಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು, ಪಕ್ಷದ ಮುಖಂಡರು ಹಾಗೂ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ 20 ಮಂದಿ ಕಾರ್ಯಕರ್ತರು ಬಿಹಾರದಲ್ಲಿ ನಡೆಯುತ್ತಿರುವ ಮತಾಧಿಕಾರ ರ್ಯಾಲಿಯಲ್ಲಿ ಭಾಗವಹಿಸಲು ಇಂದು ಉತ್ತರ ಪ್ರದೇಶದ ಗೋರಖ್ಪುರ ಭೇಟಿ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ ಭಾಗವಹಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಬಿಹಾರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಪ್ರದೇಶದ ಗೋರಖ್ ಪುರ ವಿಮಾನ ನಿಲ್ದಾಣದಲ್ಲಿ ಇಳಿದು ಬಿಹಾರದ ಗೋಪಾಲ್ ಗಂಜ್‌ಗೆ ರಸ್ತೆ ಮಾರ್ಗವಾಗಿ ಪ್ರಯಾಣ ಬೆಳೆಸಿದರು.

ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿದರು. ಈ ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಡಾ. ಸುಧಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಯತೀಂದ್ರ ಸಿದ್ದರಾಮಯ್ಯ ಸಾಥ್‌ ನೀಡಿದ್ದಾರೆ.

Read Also : ಕುಮಾರಣ್ಣಂಗೆ ಏನಾಯ್ತು? ಇಷ್ಟೊಂದು ವೀಕ್‌ ಆಗಿದ್ಯಾಕೆ? ಎಚ್‌ಡಿಕೆ, ಅನಾರೋಗ್ಯದ ಬಗ್ಗೆ ನಿಖಿಲ್‌ಗೆ ಆತಂಕ ಯಾಕೆ?

Exit mobile version