ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ Disha ಸಭೆಯನ್ನ ನಡೆಸಲಾಯಿತು. ಲೋಕಸಭಾ ಸದಸ್ಯರು, ಶಾಸಕರು ಹಾಗೂ ಅಧಿಕಾರಿಗಳ ಜೊತೆ ಈ ಸಭೆ ನಡೆದಿದ್ದು, ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ 5300 ಕೋಟಿ ರೂಪಾಯಿ ಭದ್ರಾ ಮೇಲ್ದಂಡೆ ಯೋಜನೆಗೆ ಕೊಡುವುದಾಗಿ ಘೋಷಿಸಿದ್ರು. ಆದ್ರೆ ನಯಾಪೈಸೆ ಕೊಡಲಿಲ್ಲ ಎಂದು ಕೇಂದ್ರದ ಮಲತಾಯಿ ಧೋರಣೆಗೆ ಕಿಡಿಕಾರಿದರು.
ರಾಜ್ಯ ಸಂಸದರು, ರಾಜ್ಯ ಸಭಾ ಸದಸದ್ಯರು ಜವಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು. ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತಾಡಲಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದ್ರು. ಇನ್ನು ಕೇಂದ್ರ ಸರ್ಕಾರ ದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ ಎಂದರು. ಅಷ್ಟೇಅಲ್ಲದೇ ಕೇಂದ್ರದ ಯೋಜನೆಗಳಿಗೆ ಕೇಂದ್ರ ದಿಂದ ಹಣ ಬರ್ತಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.





ಈ ಬಳಿಕ ಸಭೆಯಲ್ಲಿ ಸಂಸದರೊಂದಿಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು. ಕೇಂದ್ರ ಸರ್ಕಾರಕ್ಕೆ ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ, ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ ಸೆಳೆದರು.
15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿ ಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.
ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು. ಕೇಂದ್ರ ಪಿಂಚಣಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಸಂಸದರಿಗೆ ಪ್ರಶ್ನಿಸಿದರು. ಕೇಂದ್ರದಿಂದ ಇನ್ನೂ ನರೇಗಾ ಹಣ ಬಾರದ ಅಂಕಿ ಅಂಶಗಳನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಈ ವೇಳೆ, ಏಕೆ ಕೇಂದ್ರ ಸರ್ಕಾರದ ಬಳಿ ಹಣ ಇಲ್ಲವೇ ? ಕುಡಿಯುವ ನೀರಿಗೆ ಹಣ ಕೊಡಲಾಗದಷ್ಟು ಕೇಂದ್ರ ದುರ್ಬಲವಾಗಿದೆಯೇ ಎಂದು ದಿಶಾ ಸಮಿತಿ ಸದಸ್ಯರಾದ ಶಾಸಕ ರಿಜ್ವಾನ್ ಅರ್ಷದ್ ಅವರು ಸಂಸದರಿಗೆ ಪ್ರಶ್ನಿಸಿದರು.
ಇನ್ನು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಾಗಿ ಕೇಂದ್ರದಿಂದ ಬರಬೇಕಾಗಿದ್ದ ಎರಡು ವರ್ಷದ ಪಾಲು 10000 ಬಾಕಿ ಕೋಟಿಯಷ್ಟು ಬಾಕಿ ಉಳಿದಿದೆ. ಹೀಗೆ ಬಾಕಿ ಉಳಿಸಿಕೊಂಡಿರುವುದರಿಂದ ಬಹಳ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು. ಇನ್ನು 23-24 ರ ಸಾಲಿನಲ್ಲಿ 7656 ಕೋಟಿ, 24-25 ರ ಸಾಲಿನಲ್ಲಿ 3233 ಕೋಟಿ ಹಣವನ್ನು ಕೇಂದ್ರ ಜಲಜೀವನ್ ಮಿಷನ್ ಯೋಜನೆಯಲ್ಲಿ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ಅಂಕಿ ಅಂಶವನ್ನು ಸಿಎಂ ಸಿದ್ದರಾಮಯ್ಯರ ಮುಂದಿಟ್ಟರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆಗಳು
ಜಿಲ್ಲಾ ಮಟ್ಟದಲ್ಲಿ ದಿಶಾ ಸಭೆಗಳು ನಿಗಧಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ ಮುಖ್ಯಮಂತ್ರಿಗಳು ಸಂಸದರೂ ಈ ಬಗ್ಗೆ ಆಸಕ್ತಿ ವಹಿಸಬೇಕು ಎಂದರು.
ಮೂರು ತಿಂಗಳ ಒಳಗೆ ನರೇಗಾ ಕ್ರಿಯಾ ಯೋಜನೆ ಕಡ್ಡಾಯವಾಗಿ ಸಿದ್ದಪಡಿಸಬೇಕು. ಏನೇ ಕಾರಣದಿಂದ ಹಿಂದಿನ ಕ್ರಿಯಾ ಯೋಜನೆ ಆಗಿದ್ದರೆ ಅದನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಎಂದು ಸಿಎಂ ಸೂಚನೆ ನೀಡಿದರು.
ಕಲ್ಬುರ್ಗಿ ಲೋಕಸಭಾ ಸದಸ್ಯ ರಾಧಾಕೃಷ್ಣ, ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್, ಶಾಸಕ ರಿಜ್ವಾನ್ ಹರ್ಷದ್, ಸಿಮೆಂಟ್ ಮಂಜು, ಎಂಎಲ್ಸಿ ಸಂಕನೂರ್, ನಾಗರಾಜ್ ಯಾದವ್ ಸಭೆಯಲ್ಲಿ ಭಾಗಿಯಾಗಿದ್ರು. ಸರ್ಕಾರ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ರು.
