ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಸಂಬಂಧ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದರು.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಡಗೈ ಸಮುದಾಯಕ್ಕೆ 6% ಬಲಗೈ ಸಮುದಾಯಕ್ಕೆ 6% ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ 5 ರಷ್ಟು ಮೀಸಲಾತಿ ನೀಡಲು ತೀರ್ಮಾನ ಮಾಡಿದ್ದೇವೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ್ದೇವೆ. ದಶಕಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಕೆಲ ಮಾರ್ಪಾಡುಗಳೊಂದಿಗೆ ಎಬಿಸಿ ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದೆ. ಹಾಗೆಯೇ ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದರು.
ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ. ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ
ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಮೇಲೆ ಪ್ರಸ್ತಾಪಿಸಿದ ಮಾರ್ಪಾಟುಗಳೊಂದಿಗೆ ಅಂಗೀಕರಿಸಿದೆ ಎಂಬ ಅಂಶಗಳನ್ನು ಸದನದ ಮುಂದೆ ಮಂಡಿಸಲು ಸರ್ಕಾರವು ಸಂತೋಷ ಪಡುತ್ತದೆ.
Read Also : ಅನಾಥಾಶ್ರಮದಲ್ಲಿರುವ ಮಕ್ಕಳಿಗೆ ವಿಶೇಷ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ – ಸಚಿವೆ ಹೆಬ್ಬಾಳ್ಕರ್
ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ ಎಂದು ತಿಳಿಸಿದರು.

