ಸಿಎಂ ಸಿದ್ದರಾಮಯ್ಯ ಇದ್ದಕ್ಕಿಂದ್ದಂತೆ ಅನಿರೀಕ್ಷಿತವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಇಂದು ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಿಎಂ ದಿಢೀರ್ ಭೇಟಿಯಿಂದ ಆಸ್ಪತ್ರೆಯಲ್ಲಿದ್ದ ವೈದ್ಯರು, ಸಿಬ್ಬಂದಿಗಳು ಅರೇ ಕ್ಷಣ ತಬ್ಬಿಬ್ಬಾಗಿದ್ರು.

ಆಸ್ಪತ್ರೆ ವಾರ್ಡ್ ಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ , ಚಿಕಿತ್ಸಾ ಸೌಲಭ್ಯ, ಸಮಸ್ಯೆಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಿಎಂ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸಾಥ್ ನೀಡಿದರು.

Share.
Leave A Reply