ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದರು. ಈ ವೇಳೆ ಮಾತನಾಡಿನ ಸಿಎಂ ಸಿದ್ದರಾಮಯ್ಯ, ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಏಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಹೇಳಿದ್ದಾರೆ.

ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಫಿಕೇಶನ್‌ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಸಭೆ ಅಪೂರ್ಣಗೊಂಡಿದ್ದು, ಜುಲೈ 15ಕ್ಕೆ ಮತ್ತೆ ಸಭೆ ಸೇರಲು ನಿರ್ಧರಿಸಲಾಗಿದೆ.

Share.
Leave A Reply