ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಘರ್ಷ ಇನ್ನೂ ತನ್ನಗಾಗಿಲ್ಲ. ಇದರ ಮಧ್ಯೆಯೇ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಇಬ್ಬರೂ ನಾಯಕರು ನಗರದ ಖಾಸಗಿ ಹೊಟೇಲ್‌ನಲ್ಲಿ ಪರಸ್ಪರ ಭೇಟಿ ಮಾಡಿ ಗೌಪ್ಯ ಚರ್ಚೆ ನಡೆಸಿದ್ದಾರೆ. ನಗರದಲ್ಲಿ ಆಶ್ರಯ ಮನೆಗಳ ಹಸ್ತಾಂತರ ಕಾರ್ಯಕ್ರಮದ ಸಲುವಾಗಿ ವಿಶೇಷ ವಿಮಾನದ ಮೂಲಕ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ಆ ವೇಳೆ ಇಬ್ಬರೂ ಸಭೆ ನಡೆಸಿದ್ದಾರೆ.
ಆ ವೇಳೆ ಆಪ್ತರಾಗಿರುವ ಸತೀಶ ಜಾರಕಿಹೊಳಿ, ಜಮೀರ್ ಅಹ್ಮದ್‌ಖಾನ್, ಕೆ.ಎಚ್. ಮುನಿಯಪ್ಪ, ಡಾ. ಎಚ್.ಸಿ. ಮಹದೇವಪ್ಪ ಕೂಡ ಇದ್ದರು. 45 ನಿಮಿಷಗಳ ಕಾಲ ಇಬ್ಬರೂ ಮಾತನಾಡಿದ್ದಾರೆ. ಈ ಭೇಟಿ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಬಣದ ನಾಯಕರು ಭಾಗವಹಿಸದಿರುವುದು ಕೂಡ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ

