Site icon BosstvKannada

ರಾಜ್ಯದ ಈ ಜಿಲ್ಲೆಗಳಿಗೆ ಶೀತ ಗಾಳಿಯ ಎಚ್ಚರಿಕೆ!

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳು ಈಗಾಗಲೇ ಚಳಿಯಿಂದಾಗಿ ತತ್ತರಿಸಿ ಹೋಗಿವೆ. ಈ ಮಧ್ಯೆ ಹವಾಮಾನ ಇಲಾಖೆಯು ಕೆಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆ ನೀಡಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಮುಂದಿನ 2 ದಿನಗಳ ಕಾಲ ಉತ್ತರ ಒಳನಾಡನ ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ 7 ಜಿಲ್ಲೆಗಳಲ್ಲಿ ಶೀತ ಗಾಳಿ (cold wave warning) ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವುದಿಲ್ಲ ಎಂದು ಹವಾಮಾನ ಇಲಾಖೆ (Karnataka Weather) ಸೂಚಿಸಿದೆ.
ಡಿಸೆಂಬರ್‌ 12ರಿಂದ 17ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಗುರುವಾರ ಬೀದರ್ ನಲ್ಲಿ ಕನಿಷ್ಠ 9 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಹೀಗಾಗಿ ಹವಾಮಾನ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ. ಶೀತ ಗಾಳಿಗೆ ಒಡ್ಡಿಕೊಂಡಾಗ ಮರಗಟ್ಟುವಿಕೆ, ಬಿಳಿ ಅಥವಾ ಹಳದಿ ಬಣ್ಣಕ್ಕೆ ತಿರುಗುವುದು, ಮರಗಟ್ಟುವಿಕೆಗೆ ಕಾರಣವಾಗಬಹುದು ಹಾಗೂ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ವೈದ್ಯರನ್ನು ಕಾಣಬೇಕು.. ಶಾಖದ ನಷ್ಟದಿಂದಾಗಿ ನಡುಕ, ಮಾತನಾಡಲು ತೊಂದರೆ, ನಿದ್ರಾಹೀನತೆ, ಸ್ನಾಯುಗಳಲ್ಲಿ ಬಿಗಿತ, ಉಸಿರಾಟದ ತೊಂದರೆ ಉಂಟಾಗಬಹುದು. ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು, ನಿಮ್ಮ ತಲೆ, ಕುತ್ತಿಗೆ, ಬೆರಳುಗಳು ಮತ್ತು ಕಾಲುಗಳನ್ನು ಸರಿಯಾಗಿ ಮುಚ್ಚಿಕೊಳ್ಳಿ ಮತ್ತು ಕೈಗವಸುಗಳು, ಕ್ಯಾಪ್, ಮಫ್ಲರ್ ಮತ್ತು ವಾಟರ್‌ಪ್ರೂಫ್‌ ಬೂಟುಗಳು, ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ಶೀತ ಅಲೆಯ ಸಮಯದಲ್ಲಿ, ಸಾಧ್ಯವಾದಷ್ಟು ಒಳಾಂಗಣದಲ್ಲಿಯೇ ಇರುವಂತೆ ಸೂಚಿಸಲಾಗಿದೆ.

ದೇಹದ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಾಕಷ್ಟು ಪ್ರಮಾಣದಲ್ಲಿ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಿ ಮತ್ತು ವಿಟಮಿನ್-ಸಿ ಸಮೃದ್ಧವಾಗಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವಂತೆ ಸಲಹೆ ನೀಡಲಾಗಿದೆ. ಅಲ್ಲದೇ, ವಾಹನ ಚಲಾವಣೆ ಮಾಡುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Exit mobile version