Site icon BosstvKannada

ಸರ್ಕಾರಿ ಕೆಲಸ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಶರಣು

ದಾವಣಗೆರೆ: ಯುವಕನೋರ್ವ ಸರ್ಕಾರಿ ಕೆಲಸ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಅಂಜಿನಪ್ಪ(26) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎನ್ನಲಾಗಿದೆ. ಪದವಿ ಮುಗಿಸಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೂ ಯಾವುದೇ ಸರ್ಕಾರಿ ಕೆಲಸ ಸಿಕ್ಕಿಲ್ಲ ಎಂದ ಮನನೊಂದು ಅಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಗಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಮನೆಯವರು ರೂಮ್ ಬಾಗಿಲು ಬಡಿದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಅಂಜಿನಪ್ಪ ಪದವಿ ಪೂರೈಸಿದ ನಂತರ ಸರ್ಕಾರಿ ನೌಕರಿ ಪಡೆಯುವುದಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದ ಎನ್ನಲಾಗಿದೆ. ಹೀಗಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದ್ದ. ಇದಕ್ಕಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದ. ಮನೆಯಲ್ಲಿನ ತನ್ನ ರೂಮ್ ನಲ್ಲಿ ಯಾವಾಗಲೂ ಓದುತ್ತಿದ್ದ. ಆದರೆ, ಪ್ರಯತ್ನಕ್ಕೆ ಫಲ ಸಿಗಲಿಲ್ಲ ಎಂದು ನೊಂದು ಮಾತನಾಡುತ್ತಿದ್ದ. ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಪೊಲೀಸರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version