ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮದ್ದೂರಿನಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಜೋರಾಗಿದೆ. ಗಣೇಶ ಮೆರವಣಿಗೆ ವೇಳೆ ಅನ್ಯಕೋಮಿನಿಂದಲೇ ಕಲ್ಲು ತೂರಾಟ ನಡೆದಿದೆ. ಹೀಗಾಗಿ ಮಸೀದಿ ಮುಂದೆ ಪ್ರತಿಭಟನಾ ಮೆರವಣಿಗೆ ನಡೆದಿದೆ. ಹೋರಾಟಗಾಗರರ ಆಕ್ರೋಶ ಭುಗಿಲೆದ್ದಿದೆ. ಅಷ್ಟೇ ಅಲ್ಲದೇ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆಯೇ ತಳ್ಳಾಟ ನಡೆದಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗ್ತಿದೆ.
ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು.
ಇದಾದ ಬಳಿಕ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ. ನಾವು ಸುಮ್ಮನಿದ್ದರೂ ನಮ್ಮ ಮೇಲೆ ಈ ರೀತಿ ದಾಳಿ ಮಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಅವರ ಹಬ್ಬ ಮಾಡಿದಾಗ ನಾವು ಗಲಾಟೆ ಮಾಡಿದ್ದವ ಎಂದು ಹಿಂದೂ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Also : ಮದ್ದೂರಲ್ಲಿ ಉದ್ವಿಗ್ನ ಸ್ಥಿತಿ: ನಾಳೆವರೆಗೂ ನಿಷೇಧಾಜ್ಞೆ ಜಾರಿ!
