ನವದೆಹಲಿ: ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

25 ವರ್ಷದ ರೈಹಾನ್ ವಾದ್ರಾ ತನ್ನ ಬಹುಕಾಲದ ಗೆಳತಿ ಅವಿವಾ ಬೇಗ್‌ ಜೊತೆ ಈಗ ಮದುವೆಯಾಗಲು ಸಿದ್ಧರಾಗಿದ್ದಾರೆ. ಈ ಮದುವೆಗೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅವಿವಾ ಬೇಗ್ ಮತ್ತು ಅವರ ಕುಟುಂಬ ದೆಹಲಿಯಲ್ಲಿ ನೆಲೆಸಿದ್ದು, ಪರಸ್ಪರ ಮದುವೆಗೆ ಸಿದ್ಧತೆ ನಡೆಸಿವೆ ಎಂದು ತಿಳಿದು ಬಂದಿದೆ.

ರೈಹಾನ್ ವಾದ್ರಾ ಒಬ್ಬ ದೃಶ್ಯ ಕಲಾವಿದ. 10 ವರ್ಷಗಳಿಂದ ತಮ್ಮ ಕ್ಯಾಮೆರಾ ಲೆನ್ಸ್ ಮೂಲಕ ಕೆಲಸ ಮಾಡುತ್ತಿದ್ದಾರೆ. ಮುಂಬೈನ ಕೊಲಾಬಾದಲ್ಲಿರುವ ಸಮಕಾಲೀನ ಕಲಾ ಗ್ಯಾಲರಿಯಾದ ಎಪಿಆರ್‌ಇ ಆರ್ಟ್ ಹೌಸ್‌ನಲ್ಲಿ ಅವರ ಜೀವನ ಚರಿತ್ರೆ ಲಭ್ಯವಿದೆ. ಅವರ ಪೋರ್ಟ್‌ಫೋಲಿಯೊ ವನ್ಯಜೀವಿ ಸೇರಿದಂತೆ ಹಲವು ವಲಯಗಳನ್ನು ಒಳಗೊಂಡಿದೆ. ಅವಿವಾ ಬೇಗ್ ಕೂಡ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಎಂದು ತಿಳಿದು ಬಂದಿದೆ.

Share.
Leave A Reply