Site icon BosstvKannada

ನಾನು ಬಾಯಿ ಬಿಟ್ರೆ, ಸರ್ಕಾರ ಅಲುಗಾಡುತ್ತೆ : ಬಿ.ಆರ್‌. ಪಾಟೀಲ್‌

ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ವಸತಿ ಇಲಾಖೆಯಲ್ಲಿನ ಮನೆ ಹಂಚಿಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವ ಆಡಿಯೋ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಪದೇ ಪದೇ ಸರ್ಕಾರದ ವಿರುದ್ಧ ಧ್ವನಿ ಎತ್ತುವ ಮೂಲಕ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿಯೊಂದಿಗೆ ಮಾತನಾಡಿರುವ ಅವರು, ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್‌ನಲ್ಲಿ ಹಣ ಪಡೆದವರಿಗೆ ಮನೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಸತಿ ಇಲಾಖೆಯಲ್ಲಿ ಮನೆ ಹಂಚಿಕೆ ವಿಚಾರವಾಗಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಅವರು ಮಾತನಾಡಿದ ಆಡಿಯೋ ವೈರಲ್ ಆಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಇಲಾಖೆ ವಿರುದ್ಧವೇ ಬಿ ಆರ್ ಪಾಟೀಲ್ ಆರೋಪ ಮಾಡಿದ್ದು, ರಾಜಕೀಯದಲ್ಲಿ ಬಿರುಗಾಳಿ ಬೀಸಿದೆ.

ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವ ರಾಜ್ಯ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ.

ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ.

ವಸತಿ ಹಾಗೂ ಅಲ್ಪಸಂಖ್ಯಾತ ಇಲಾಖೆ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಜೊತೆಗೆ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋ ವೈರಲ್ ಆಗುತ್ತಿದೆ. ಗಾಂಧಿ ಹೌಸಿಂಗ್ ಕಾರ್ಪೊರೇಷನ್‌ನಲ್ಲಿ ಹಣ ಕೊಟ್ಟವರಿಗೆ ಮಾತ್ರ ವಸತಿ ನೀಡಲಾಗುತ್ತಿದೆ. ನೈಜ ಫಲಾನುಭವಿಗಳಿಗೆ ಮನೆ ಸಿಗುತ್ತಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ.

ಸದ್ಯ ಪ್ರತಿಪಕ್ಷಗಳಿಗೆ ಬಿ.ಆರ್ ಪಾಟೀಲ್ ಆಡಿಯೋ ಅಸ್ತ್ರವಾಗಿದೆ. ಬಿ.ಆರ್‌ ಪಾಟೀಲ್‌ ಆಡಿಯೋ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೀಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮುಖ್ಯಮಂತ್ರಿ ಗಮನಕ್ಕೆ ತಂದ ಜಮೀರ್!
ಪ್ರತಿಪಕ್ಷಗಳಿಗೆ ಬಿಆರ್ ಪಾಟೀಲ್ ಆಡಿಯೋ ಅಸ್ತ್ರವಾಗ್ತಿದಂತೆ ವಸತಿ ಸಚಿವ ಜಮೀರ್ ಅಹಮ್ಮದ್ ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದಾರೆ. ಬಿ.ಆರ್ ಪಾಟೀಲ್ ಆಡಿಯೋ ಕುರಿತು ಸಿಎಂ ಸಿದ್ದರಾಮಯ್ಯಗೆ ಜಮೀರ್ ಅಹಮ್ಮದ್ ವಿವರಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Read Also : ಕನ್ನಡಿಗರಿಗೆ ಕ್ಷಮೆ ಕೇಳಿದ ಅಮಿತ್‌ ಶಾ.. ಆದಿಚುಂಚನಗಿರಿ ಮಠದ ಬಗ್ಗೆ ಹೇಳಿದ್ದೇನು?

Exit mobile version