ಬೆಳಗಾವಿ: ರಾಜ್ಯ ಕಾಂಗ್ರೆಸ್ (Congress) ಸರ್ಕಾರವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಜಾರಿಗೆ ತರುವ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಹುನ್ನಾರ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ವಿರೋದಿ ನಡೆ. ಸ್ಪೀಕರ್ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದ್ದಾರೆ. ಈ ಮಸೂದೆ ಮೂಲಕ ಪತ್ರಕರ್ತರ ಧ್ವನಿ ಕೂಡ ನಿಯಂತ್ರಿಸುವ ಕೆಲಸ ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲೂ ಯಾರಾದರೂ ತಮ್ಮ ಅಭಿಪ್ರಾಯ ತಿಳಿಸಿದರೆ, ಹತ್ತಿಕ್ಕಿ, 7-8 ವರ್ಷ ಜೈಲಿಗೆ ಹಾಕುವ ದುಸ್ಸಾಹಸಕ್ಕೆ ಕೈ ಹಾಕಿದೆ. ಹೊರಟಿದ್ದಾರೆ ಎಂದು ಆಕ್ಷೇಪಿಸಿದರು.

ಮಂಡ್ಯ ಜಿಲ್ಲೆಯ ಸ್ವಾತಂತ್ರ್ಯ ಯೋಧರಿಗೆ 8 ತಿಂಗಳಿಂದ ಈ ಕಾಂಗ್ರೆಸ್ ಸರಕಾರ ಗೌರವಧನ ನೀಡಿಲ್ಲ. ಯಾವನಿಗೋ ದಬ್ಬಾಳಿಕೆ, ಬೆದರಿಕೆ ಹಾಕಿದಂತೆ ನನಗೆ ಬೆದರಿಕೆ ಹಾಕಲು ಬರಬೇಡಿ. ನಾನೂ ಕೂಡ ಜನಸೇವಕ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಭ್ರಷ್ಟಾಚಾರದ ಕುರಿತು ತಮ್ಮ ಬಾಯಲ್ಲಿ ಮಾತನಾಡದೇ ಇರುವುದು ಒಳ್ಳೆಯದು. ರಾಜ್ಯದ ರಾಜಕೀಯದಲ್ಲಿ ಭ್ರಷ್ಟಾಚಾರದ ಪಿತಾಮಹ ಯಾರೆಂದು ಕೇಳಿದರೆ ಎಲ್ಲರೂ ಹೇಳುತ್ತಾರೆ. ಯಡಿಯೂರಪ್ಪ ಅವರ ವಿರುದ್ಧ ಷಡ್ಯಂತ್ರದ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share.
Leave A Reply