ಮಹಾಮಾರಿ ಕೊರೊನಾ ರಾಜ್ಯಕ್ಕೆ ಮತ್ತೆ ಒಕ್ಕರಿಸಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಕಾವೇರಿ ನಿವಾಸದಲ್ಲಿ ಸಭೆ ನಡೆಸಿ, ಸೋಂಕಿತರು ಹಾಗೂ ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದಿದ್ದಾರೆ ಅಂತಾ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹತೋಟಿಯಲ್ಲಿದ್ದು ಜನ ಭಯಪಡುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಈ 10 ಜನರು ಇತರ ಮಾರಕ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರೊನಾ ಕಾರಣವಲ್ಲ ಅಂತಾ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,220ಕ್ಕೆ ಏರಿಕೆಯಾಗಿದ್ದು, ಹೆಚ್ಚುತ್ತಿರುವ ಕೊರೊನಾದಿಂದ ಈಗಾಗಲೇ 11 ಮಂದಿ ತಮ್ಮ ಪ್ರಾಣವನ್ನ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಹೋರಬಿದ್ದಿತ್ತು. ಆದರೆ ಈಗ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ಸುಳ್ಳು ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಸತ್ತ 11 ಜನರಲ್ಲಿ 10 ಜನರು ಬೇರೆ ಬೇರೆ ಕಾಯಿಲೆಯಿಂದ ಮೃತಪಟ್ಟಿದ್ದು, ಓರ್ವ ಮೃತ ವ್ಯಕ್ತಿಯ ರಿಪೋರ್ಟ್ ಬರಬೇಕಿದೆ ಎಂದಿರುವ ದಿನೇಶ್, ಈಗಿರುವ ಕೊವಿಡ್ ರೂಪಾಂತರಿ ವೈರಸ್ ಸೌಮ್ಯ ಸ್ವಭಾವದ್ದು ಈ ವೈರಸ್‌ಗೆ ಯಾರು ಸಹ ಭಯ ಪಡುವುದು ಬೇಡ ಎಂದು ಹೇಳಿದ್ದಾರೆ..
