ಕುಡಿದ ಅಮಲಿನಲ್ಲಿ ಕೃತ್ಯ ಎಸಗಿರುವ ಸೈಯದ್
ಚಾಮರಾಜಪೇಟೆ (Chamarajpet)ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಶೇಕ್ ನಸ್ರು ಎಂದು ಗುರ್ತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಈ ಕೃತ್ಯದಲ್ಲಿ ಇತರರು ಭಾಗಿಯಾಗಿರುವುದು ಕಂಡು ಬಂದಿದೆ. ಆರೋಪಿಯನ್ನು ಬಂಧಿಸಿ ಜನವರಿ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ.
ಈ ಘಟನೆ ಚಾಮರಾಜಪೇಟೆಯ (Chamarajpet) ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿತ್ತು. ಹಸುಗಳ (Cow)ಮಾಲೀಕ ಕರ್ಣ ಅವರು ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ(Cottonpet Police Station) ದೂರು ನೀಡಿದ್ದು, ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇನ್ನು ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದ್ರೆ ಇನ್ನು ಮುಂದೆ ಹಾಲು ಕರೆಯಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.