ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಸುರೇಶ್ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.
ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ, ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ
ಅವರು ಹೇಳಿದ್ದರಲ್ಲಿ ತಪ್ಪೇನಿದೆ. ಮುಖ್ಯಮಂತ್ರಿಯಾಗಿರುವವರು ಮುಂದುವರಿಯುತ್ತೇನೆ ಎಂದು ಹೇಳಿದರೆ ಅದರಲ್ಲಿ ತಪ್ಪೇನಿದೆ? ಅವರು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನು ಸಿಎಂ ಮಾಡಿದೆ. ಅವರು ಸರ್ಕಾರ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಚರ್ಚೆ ಏನು? ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ
ಇನ್ನೂ ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ ಎಂದರು.
ಡಿಸಿಎಂ ಡಿ.ಕೆ. ಶಿವಕುಮಾರ್ ನನ್ನ ಮುಂದೆ ಯಾವುದೇ ಆಯ್ಕೆ ಇಲ್ಲ, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರು ಮೊದಲಿನಿಂದಲೂ ಅದನ್ನೇ ಹೇಳುತ್ತಿದ್ದಾರೆ, ಈಗಲೂ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹಿಂದೆಯೂ ಹೇಳಿದ್ದರು. ಈಗಲೂ ಹೇಳಿದ್ದಾರೆ. ಮುಂದೆಯೂ ಹೇಳುತ್ತಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಹೈಕಮಾಂಡ್ ತೀರ್ಮಾನವನ್ನು ಪಾಲಿಸಿ ಶಿಸ್ತು ಕಾಪಾಡುವುದು ಅವರ ಕರ್ತವ್ಯ. ಹಾಗಾಗಿ ಅವರು ಕೆಲವು ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.
