ನೆಮ್ಮದಿಯಾಗಿದ್ದ ಡೆವಿಲ್‌ ನಿದ್ದೆಗೆಡಸಿದ್ದ ರೇಣುಕಾಸ್ವಾಮಿ ಕೇಸ್‌.. ಅಷ್ಟಕ್ಕೂ ದರ್ಶನ್‌ ಬೇಲ್‌ ರದ್ದಾಗಲು ಕಾರಣಗಳು ಹೀಗಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.. ಜಾಮೀನು ಅವಧಿಯಲ್ಲಿ ದರ್ಶನ್ ತಪ್ಪುಗಳನ್ನು ಮಾಡಿದ್ದಾರೆ ಎಂಬ ಆರೋಪವಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್​ಗೆ ಸಂಕಷ್ಟ ಎದುರಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಯ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ದರ್ಶನ್ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಬಂದೊದಗಿದೆ. ದರ್ಶನ್ ಜಾಮೀನು ರದ್ದಾಗಲು ಅವರು ಸ್ವಯಂಕೃತ ತಪ್ಪುಗಳೇ ಇದಕ್ಕೆ ಕಾರಣ. ದರ್ಶನ್ ಅವರು ಜಾಮೀನು ಪಡೆದ ಬಳಿಕ ಅದನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಸರ್ಕಾರಿ ಪರ ವಕೀಲರು ಮಾಡಿದ್ದಾರೆ. ಹಾಗಾದ್ರೆ, ದರ್ಶನ್‌ ಮಾಡಿರುವ ತಪ್ಪುಗಳು ಹೀಗಿವೆ..

ದರ್ಶನ್‌ ಮಾಡಿದ ತಪ್ಪೇನು..?
* ಬೆನ್ನುನೋವಿನ ನೆಪ ಹೇಳಿ ಕೋರ್ಟ್‌ಗೆ ಗೈರಾಗಿದ್ದ ದರ್ಶನ್‌
* ಮರುದಿನವೇ ಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿದ್ದ ನಟ
* ಕೇಸ್‌ನ ಪ್ರಮುಖ ಸಾಕ್ಷಿ ಚಿಕ್ಕಣ್ಣ ಜೊತೆ ಸಿನಿಮಾ ವೀಕ್ಷಣೆ
* ಇದು ಕೂಡ ದೊಡ್ಡ ತಪ್ಪುಗಳಲ್ಲಿ ಒಂದು ಎಂದು ವಾದ

ಜಾಮೀನು ದುರುಪಯೋಗಪಡಿಸಿಕೊಂಡ್ರಾ ದಾಸ..?
ಈ ಮೊದಲು ಅವರು ಬೆನ್ನುನೋವಿನ ನೆಪ ಹೇಳಿ ನ್ಯಾಯಾಲಯಕ್ಕೆ ಗೈರಾಗಿದ್ದರು. ಆದರೆ, ಮರುದಿನವೇ ಅವರು ಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿದ್ದರು. ಇದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಜಾಮೀನು ಸಿಕ್ಕ ಬಳಿಕ ಪ್ರಕರಣದ ಪ್ರಮುಖ ಸಾಕ್ಷಿ ಚಿಕ್ಕಣ್ಣ ಜೊತೆ ಸಿನಿಮಾ ವೀಕ್ಷಿಸಿದ್ದಾರೆ. ಇದು ಕೂಡ ದೊಡ್ಡ ತಪ್ಪುಗಳಲ್ಲಿ ಒಂದು. ಇದು ದರ್ಶನ್​ಗೆ ಮುಳುವಾಗಿದೆ. ಹೈಕೋರ್ಟ್ ಮಾಡಿದ ಕೆಲವು ತಪ್ಪುಗಳ ಬಗ್ಗೆಯೂ ಸುಪ್ರೀಂಕೋರ್ಟ್ ಅಸಮಾಧಾನ ಹೊರಹಾಕಿದೆ.

ದರ್ಶನ್‌ರ ಸ್ವಯಂಕೃತ ತಪ್ಪುಗಳಿಂದಲೇ ಸಂಕಷ್ಟ?
ಇನ್ನು, ಕೊಲೆ ನಡೆದ ಸ್ಥಳದ ಮಣ್ಣು ಮತ್ತು ದರ್ಶನ್ ಪಾದರಕ್ಷೆಯ ಮಣ್ಣು ಹೊಂದಾಣಿಕೆಯಾಗಿದೆ. ಮೃತನ ಡಿಎನ್‌ಎ ಕಲೆಗಳು ಆರೋಪಿಗಳ ಬಟ್ಟೆ ಮೇಲೆ ಪತ್ತೆಯಾಗಿದೆ. ಹೈಕೋರ್ಟ್ ಜಾಮೀನು ತೀರ್ಪು ದಾಖಲೆಗಳಿಗೆ ವಿರುದ್ಧವಾಗಿದೆ. ಇನ್ನು ದರ್ಶನ್ ಪ್ರಭಾವಿ ವ್ಯಕ್ತಿ. ಅವರು ಪ್ರಭಾವ ಬಳಸಿ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಸಾಕಷ್ಟು ವಿಧಿವಿಜ್ಞಾನ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳಿವೆ. ಇದನ್ನು ಸರ್ಕಾರಿ ಪರ ವಕೀಲರು ಕೋರ್ಟ್​ಗೆ ಮನವಿ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. ಸದ್ಯ ಈ ಎಲ್ಲ ಕಾರಣಗಳಿಂದ ದಾಸನಿಗೆ ಜೈಲು ಫಿಕ್ಸ್‌ ಆಗಿದೆ.

Read Also : ದಾಸನಿಗೆ ಶಾಕ್?‌ ಮತ್ತೆ ಸಿಡಿದ ರಮ್ಯಾ! ರೊಚ್ಚಿಗೆದ್ದ ಡಿ ಫ್ಯಾನ್ಸ್!‌

ಇನ್ನು ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ. ಮೊದಲು ಬೆಂಗಳೂರು ಜೈಲಿನಲ್ಲಿದ್ದ ಅವರನ್ನು ನಂತರ ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿ ದರ್ಶನ್ ಐಷಾರಾಮಿ ಜೀವನ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ. ಒಟ್ನಲ್ಲಿ ಕಾನೂನಿಗಿಂತ ಯಾರೂ ದೊಡ್ಡವರು ಇಲ್ಲ… ಚಿಕ್ಕವರು ಇಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ..

Share.
Leave A Reply