Darshan: ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಡಿ ಬಾಸ್. ದಚ್ಚು ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ.. ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿ mr and misses ದರ್ಶನ್. ಅಷ್ಟಕ್ಕೂ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಆ ಸ್ಪೆಷಲ್ ಪೋಸ್ಟ್‌ನಲ್ಲಿ ಏನಿದೆ? ಡೆವಿಲ್ ಹೊಸ ಲುಕ್ ಹೇಗಿದೆ? ಅದಕ್ಕೆ ದಾಸನ ಅಭಿಮಾನಿಗಳು ಏನಂದ್ರು? ಅದರ ಡಿಟೇಲ್ಸ್ ಇಲ್ಲಿದೆ ನೋಡಿ..
ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಸಖತ್ ಖುಷಿಯಲ್ಲಿದ್ದಾರೆ. ತಮ್ಮ 22ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮವನ್ನು ದುಪ್ಪಟ್ಟು ಮಾಡಿದ್ದಾರೆ. ಈ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಶಾಶ್ವತ ಅಂತ ಬರೆದುಕೊಂಡಿದ್ದಾರೆ. ಇದೇ ಫೋಟೋ ಈಗ ಸಖತ್ ವೈರಲ್ ಆಗುತ್ತಿದೆ. ಸದ್ಯ ನಟ Darshan ಹಾಗೂ ಪತ್ನಿ ವಿಜಯಲಕ್ಷ್ಮೀ ರೆಸಾರ್ಟ್ವೊಂದರಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸದ್ಯ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿರುವ ದರ್ಶನ್ ಪ್ರೀತಿಯ ಹೆಂಡತಿ ಮುದ್ದು ರಾಕ್ಷಸಿ ಜೊತೆ ಸಖತ್ ಸೆಲೆಬ್ರೇಷನ್ ಮಾಡಿದ್ದು, ಈ ವಿಶೇಷವಾದ ಸಂದರ್ಭದಲ್ಲಿ ಪತ್ನಿಗಾಗಿ ನಟ ದರ್ಶನ್ ಹಿಂದಿ ಹಾಡು ಹಾಡಿದ್ದಾರೆ. ಅಷ್ಟೇ ಅಲ್ಲದೇ ಪತ್ನಿ ವಿಜಯಲಕ್ಷ್ಮೀ ಜೊತೆ ನಟ ದರ್ಶನ್ ಫೇವರಿಟ್ ಮುದ್ದು ರಾಕ್ಷಸಿ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ನಟ ಚಿಕ್ಕಣ್ಣ ಸೇರಿದಂತೆ ಆಪ್ತ ಬಳಗದ ಜೊತೆ ವೆಡ್ಡಿಂಗ್ ಆನಿವರ್ಸರಿ ಆಚರಿಸಿಕೊಂಡಿದ್ದಾರೆ. ಇದೀಗ ವಿಜಯಲಕ್ಷ್ಮಿ ಅವರ ಪೋಸ್ಟ್ ಸಖತ್ ವೈರಲ್ ಆಗಿದ್ದು ಅಭಿಮಾನಿಗಳು ಬಗೆಬಗೆಯ ಕಾಮೆಂಟ್ಸ್ ಮಾಡಿದ್ದಾರೆ.
ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಅಣ್ಣ-ಅತ್ತಿಗೆ.. ನೂರು ಕಾಲ ಹೀಗೆ ಜೊತೆಯಾಗಿ ಬಾಳಿ.. 22ನೇ ವಾರ್ಷಿಕೋತ್ಸವದ ಶುಭಾಶಯಗಳು.. ನಿಮ್ಮಿಬ್ಬರ ದಾಂಪತ್ಯ ಜೀವನ ಸುಖಕರವಾಗಿರಲಿ. ಈ ಮುದ್ದಾದ ಜೋಡಿ ಮೇಲೆ ಯಾವ ಕೆಟ್ಟ ದೃಷ್ಟಿ ಬೀಳದಿರಲಿ. ಎಲ್ಲಾ ಸಮಯದಲ್ಲೂ ಜೊತೆ ಇರುವವಳು ನಿಜವಾದ ಮಡದಿ. ಪ್ರೀತಿ ಎಲ್ಲರೂ ಮಾಡುತ್ತಾರೆ. ಆದರೆ ಆ ಪ್ರೀತಿನಾ ಕೊನೆಯವರೆಗೂ ಉಳಿಸಿಕೊಂಡು ಹೋಗುವುದೇ ನಿಜವಾದ ಪ್ರೀತಿ ಎಂದೆಲ್ಲಾ ಅಭಿಮಾನಿಗಳು ಕಮೆಂಟ್‌ಗಳ ಸುರಿಮಳೆ ಸುರಿಸಿದ್ದಾರೆ..
Also Read: Most wanted terrorist: ಪಾಕ್‌ನಲ್ಲೇ ಮೋಸ್ಟ್ ವಾಟೆಂಡ್ ಉಗ್ರನ ನಿಗೂಢ ಹತ್ಯೆ.. ಕೊಂದಿದ್ದು ಹೇಗೆ?
ಇನ್ನು 2003 ಮೇ 19ರಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆಯಾಗಿದ್ದರು. ದರ್ಶನ್ ಹಾಗೂ ವಿಜಯಲಕ್ಷ್ಮಿ ಇಬ್ಬರ ಮದುವೆ ಆಮಂತ್ರಣ ಪತ್ರ ಕೂಡ ವೈರಲ್ ಆಗಿದೆ.
ಅದೇನೆ ಆಗಲಿ… ದಚ್ಚು ಬಾಳಲ್ಲಿ ಕೆಟ್ಟ ಸಮಯ ಮರೆಯಾಗಿ ಸಂತೋಷದ ಅಲೆ ಸೃಷ್ಟಿಯಾಗಿದ್ದು, ಪ್ರೀತಿ ಮಡದಿ ಜೊತೆ ನೂರು ಕಾಲ ಸುಖವಾಗಿ ಬದುಕಲಿ ಅನ್ನೋದೆ ನಮ್ಮ ಆಶಯ..

