ತುಮಕೂರಿನ ಗುಬ್ಬಿಯಲ್ಲಿರುವ ಎಚ್ ಎ ಎಲ್ ಹೆಲಿಕಾಪ್ಟರ್ ತಯಾರಿಕಾ ಕೇಂದ್ರಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿದ್ದರು. ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕ ಗುಬ್ಬಿ ಶ್ರೀನಿವಾಸ್ ಮತ್ತಿತರರು ಇದ್ದರು.


ನಂತರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಣೆ ಮಾಡಿದರು.


ಸುಂಕಾಪುರದ ಟಿ.ಬಿ ಕೆನಾಲ್ 70 ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವೀಕ್ಷಿಸಿದರು.





ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ!
ಬಳಿಕ ಶಿವಮೊಗ್ಗ ಜಿಲ್ಲೆ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೂಜೆ ಸಲ್ಲಿಸಿ, ಬಾಗಿನ ಸಮರ್ಪಿಸಿದರು. ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸಂಸದೆ ಪ್ರಭಾ ಮಲ್ಲಿಕಾರ್ಜುನ, ಶಾಸಕ ಶಿವಗಂಗಾ ಮತ್ತಿತರರು ಜತೆಗಿದ್ದರು.
Read Also : ಬೆಂಗಳೂರಿಗರೇ ಇತ್ತ ಗಮನಿಸಿ : ನೀರು ಪೂರೈಕೆಯಲ್ಲಿ ವ್ಯತ್ಯಯ, 3 ದಿನ ಕಾವೇರಿ ನೀರು ಬರಲ್ಲ..!
