BosstvKannada

ದಂಪತಿ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆಶಿ

ಆಷಾಡ ಮಾಸದ ಎರಡನೇ ಶುಕ್ರವಾರ ಇರೋ ಹಿನ್ನಲೆ ದೇವಸ್ಥಾನದಲ್ಲಿ ಜನವೋ ಜನ.. ಇಂದು ನಟ ದರ್ಶನ್‌ ಕೂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರು. ಈಗ ಡಿಸಿಎಂ ಡಿಕೆ ಶಿವಕುಮಾರ್‌ ದಂಪತಿ ಸಮೇತ ಭೇಟಿ ನೀಡಿದ್ದಾರೆ. ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ. ನಾನು ನನಗೆ ಏನು ಬೇಕು ಅದನ್ನೇ ಪ್ರಾರ್ಥನೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.

ಆಷಾಢ ಹಿನ್ನೆಲೆಯಲ್ಲಿ ಇವತ್ತು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ನೀವು ಸಿಎಂ ರೇಸ್​ನಿಂದ ಹೊರಬಿದ್ರಾ ಎಂದು ಮಾಧ್ಯಮಗಳು ಕೇಳಿದ್ದವು. ಅದಕ್ಕೆ ಶಿವಕುಮಾರ್​ ಈ ರೀತಿಯ ಉತ್ತರ ನೀಡಿದ್ದಾರೆ. ಮುಂದುವರಿದು ಮಾತನಾಡಿರುವ ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಮಗೆ ಬುದ್ಧಿವಾದ ಹೇಳಿದ್ದಾರೆ.

ಹೈಕಮಾಂಡ್ ಕೂಡ ಕೆಲವು ವಿಚಾರಗಳನ್ನು ಹೇಳಿದೆ. ಇಲ್ಲಿ ರಾಜಕೀಯ ಚರ್ಚೆ ಬೇಡ. ನಾನು ಚಾಮುಂಡಿ ಬೆಟ್ಟಕ್ಕೆ ಬಂದಿದ್ದೇನೆ. ಕುಟುಂಬ ಸಮೇತ ಚಾಮುಂಡೇಶ್ವರಿಯ ದರ್ಶನ ಮಾಡಿದ್ದೇನೆ. ನಾಡಿನ ಜನರಿಗೆ ಒಳ್ಳೆಯದಾಗಲಿ ಅಂತ ಪ್ರಾರ್ಥನೆ ಮಾಡಿದ್ದೇನೆ ಎಂದರು.

Exit mobile version