ಕ್ರಿಕೆಟ್ ಜಗತ್ತಿನ ಕಿಂಗ್ ಅಂತಲೇ ಹೆಸರಾಗಿರುವ ವಿರಾಟ್ kohliಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೂಗು ಕೇಳಿಬರ್ತಿದೆ. ಇತ್ತೀಚೆಗೆ ಸ್ಟಾರ್ ಸ್ಪೋರ್ಟ್‌ನ ಕಾರ್ಯಕ್ರಮವೊಂದ್ರಲ್ಲಿ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಭಾಗವಹಿಸಿದ್ರು.
ಈ ವೇಳೆ ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಹೀಗಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಅಂತಾ ಹೇಳಿದ್ದರು. ರೈನಾ ಅವರ ಈ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಭಾರತೀಯ ಕ್ರೀಡಾ ಇತಿಹಾಸದಲ್ಲಿ ಈವರೆಗೆ ಭಾರತ ರತ್ನ ಪ್ರಶಸ್ತಿ ಪಡೆದಿರುವ ಏಕೈಕ ಆಟಗಾರ ಅಂದ್ರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್.
2014 ರಲ್ಲಿ ಸಚಿನ್‌ಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅಂದಿನಿಂದ ಯಾವುದೇ ಆಟಗಾರನಿಗೆ ಈ ಗೌರವ ದೊರೆತಿಲ್ಲ. ಇದೀಗ ಸುರೇಶ್ ರೈನಾ ಕೊಹ್ಲಿಗೆ ಭಾರತ ರತ್ನ ನೀಡಬೇಕಾಗಿ ಒತ್ತಾಯಿಸಿದ್ದು, ದೇಶದ ಅತ್ಯುನ್ನತ ಪ್ರಶಸ್ತಿ ಪಡೆದ ಎರಡನೇ ಆಟಗಾರ ಕೊಹ್ಲಿ ಆಗ್ತಾರಾ ಅಂತಾ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೀತಿದೆ. ಇನ್ನು, ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ಕಿಂಗ್ ಕೊಹ್ಲಿ ವಿದಾಯ ಘೋಷಿಸಿದ್ರು. ಕೊಹ್ಲಿ 123 ಟೆಸ್ಟ್ ಪಂದ್ಯಗಳಲ್ಲಿ 30 ಶತಕ ಮತ್ತು 31 ಅರ್ಧಶತಕಗಳೊಂದಿಗೆ 46.85 ಸ್ಟ್ರೈಕ್ ರೇಟ್‌ನಲ್ಲಿ 9230 ರನ್ ಗಳಿಸಿದ್ದಾರೆ.
Also Read: ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ Bro Gowda
ಕಳೆದ ವರ್ಷ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದ ಕೊಹ್ಲಿ ಇದೀಗ ಟೆಸ್ಟ್ ಕ್ರಿಕೆಟ್‌ಗೂ ಗುಡ್‌ಬೈ ಹೇಳಿದ್ದಾರೆ. ಇನ್ಮುಂದೆ ಅವರು ಏಕದಿನ ಕ್ರಿಕೆಟ್ ಮಾತ್ರ ಆಡಲಿದ್ದಾರೆ. ಸದ್ಯ, ಐಪಿಎಲ್ 2025ರಲ್ಲಿ ಕಪ್ ಗೆಲ್ಲುವತ್ತ ಕೊಹ್ಲಿ ಗಮನ ಹರಿಸಿದ್ದು, ಈ ಬಾರಿ ಆರ್‌ಸಿಬಿ ಒಳ್ಳೆ ಫಾರ್ಮ್‌ನಲ್ಲಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೊಹ್ಲಿಗೆ ಭಾರತ ರತ್ನ ಸಿಗುತ್ತಾ ಅಂತಾ ಅಭಿಮಾನಿಗಳು ಕುತೂಹಲದಿಂದ ಕಾಯ್ತಿದ್ದಾರೆ.
ಇನ್ನು ನಿಮ್ಮ ಅಭಿಪ್ರಾಯವನ್ನ ಕಾಮೆಂಟ್‌ನಲ್ಲಿ ತಿಳಿಸಿ..
