Site icon BosstvKannada

ಧರ್ಮಸ್ಥಳ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಊಹಾಪೋಹ, ಕಟ್ಟು ಕತೆಗಳನ್ನು ಹೇಳ್ತಿದ್ದಾರೆ – ಸಸಿಕಾಂತ್ ಸೆಂಥಿಲ್

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಈ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್, ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಊಹಾಪೋಹ. ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ. ರೆಡ್ಡಿ ಅವರ ಆರೋಪ ಕೇಳಿ ನನಗೆ ನಗು ಬರುತ್ತಿದೆ. ನನಗೆ ಇದರ ಹಿಂದೆ ಏನಿದೆ ಎಂಬುದು ಗೊತ್ತಿಲ್ಲ ಎಂದರು.

ನಾನು ಐಎಎಸ್​ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದ್ದು, ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಜನಾರ್ಧನ ರೆಡ್ಡಿ ಅವರ ಬಂಧನ ಆಗಿತ್ತು. ನಾನು ಅವಾಗ ಮಾತ್ರ ರೆಡ್ಡಿಯವರನ್ನು ನೋಡಿದ್ದು. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ ಕುರಿತು ನಿನ್ನೆ ಮಾತನಾಡಿದ್ದ ಶಾಸಕ ಜನಾರ್ದನ ರೆಡ್ಡಿ, ಧರ್ಮಸ್ಥಳದ ವಿರುದ್ದದ ಷಡ್ಯಂತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಹಾಲಿ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದಿದ್ದರು.

Read Also : ಧರ್ಮಸ್ಥಳ ಅಪಪ್ರಚಾರ.. ಎಸ್‌ಐಟಿ ತನಿಖೆ ಬಗ್ಗೆ ಧರ್ಮಾಧಿಕಾರಿ ಮೊದಲ ರಿಯಾಕ್ಷನ್‌.. ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಸದ ಸಸಿಕಾಂತ್ ಸೆಂಥಿಲ್ ಒತ್ತಡದ ಮೇರೆಗೆ ಎಸ್​ಐಟಿ ರಚನೆ ಮಾಡಿದೆ. ಸೆಂಥಿಲ್ ಅವರು ಕಾಂಗ್ರೆಸ್ ವರಿಷ್ಠರಿಗೆ ಆಪ್ತರಾಗಿದ್ದಾರೆ. ಅವರೇ ಎಸ್​ಐಟಿ ರಚನೆಗೆ ಒತ್ತಡ ಹಾಕಿದ್ದಾರೆ. ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವ. ಅಲ್ಲದೆ, ಸಸಿಕಾಂತ್ ಸೆಂಥಿಲ್ ಜತೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ರೆಡ್ಡಿ ಆರೋಪ ಮಾಡಿದ್ದರು.

Exit mobile version