ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ.
Karnataka Deputy CM D. K. Shivakumar issued a show-cause notice to Ramanagara MLA Iqbal Hussain for his public remarks suggesting a change in the Chief Minister, calling it a breach of party discipline and demanding an explanation within a week pic.twitter.com/nQEjpBDCEf
— IANS (@ians_india) July 1, 2025
ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
