ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿಗೆ ಬಿಗ್ ಗಿಫ್ಟ್ ನೀಡಲು ತಯಾರಿ ನಡೆಸಿದ್ದಾರೆ. ಜಿಎಸ್‌ಟಿ ಸ್ಲ್ಯಾಬ್ ಬದಲಾವಣೆ ಮತ್ತು ಸರಕುಗಳ ತೆರಿಗೆ ಇಳಿಸುವ ಮೂಲಕ, ದರ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ರಿಲೀಫ್ ನೀಡಲಾಗುತ್ತಿದೆ. ದೀಪಾವಳಿಗೆ ಡಬಲ್ ಧಮಾಕಾ ನೀಡುವುದಾಗಿ ಸ್ವಾತಂತ್ರ್ಯ ದಿನದಂದು ಹೇಳಿದ್ದ ಮೋದಿ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 56ನೇ ಸಭೆಯಲ್ಲಿ ಜಿಎಸ್‌ಟಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ. ಈ ಕುರಿತಾಗಿ ತಮ್ಮ ಎಕ್ಸ್ ಅಕೌಂಟ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.
ಸ್ವಾತಂತ್ರ್ಯೋತ್ಸವದ ಭಾಷಣದ ಸಂದರ್ಭದಲ್ಲಿ, ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ಉದ್ದೇಶದ ಬಗ್ಗೆ ನಾನು ಮಾತನಾಡಿದ್ದೆ. ಸಾಮಾನ್ಯ ಜನರ ಜೀವನ ಸುಗಮಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.
ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡಿರುವ ಜಿಎಸ್‌ಟಿ ಮಂಡಳಿಯು, ಸಾಮಾನ್ಯ ಜನರು, ರೈತರು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುವ, ಜಿಎಸ್‌ಟಿ ದರ ಕಡಿತ ಮತ್ತು ಸುಧಾರಣೆಗಳ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳಿಗೆ ಸಾಮೂಹಿಕವಾಗಿ ಒಪ್ಪಿಗೆ ನೀಡಿದೆ ಅಂತಾ ಹೇಳಲು ಸಂತೋಷವಾಗುತ್ತಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Read Also : ಜಿಎಸ್‌ಟಿ ಹೊರೆ ಇಳಿಸಿದ ಕೇಂದ್ರ ಸರ್ಕಾರ.. ಯಾವುದೆಲ್ಲಾ ಅಗ್ಗ, ಯಾವುದೆಲ್ಲಾ ದುಬಾರಿ?