ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌ ನಾರಾಯಣ್‌ ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ಅವರ ಸೊಸೆಯೇ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ. ಅವರ ೨ನೇ ಮಗನ ಹೆಂಡತಿ ಪವಿತ್ರಾ, ಮಾವ ಎಸ್‌ ನಾರಾಯಣ್‌ ಸೇರಿದಂತೆ ಅತ್ತೆ ಹಾಗೂ ಗಂಡನ ವಿರುದ್ಧ ದೂರು ದಾಖಲಿಸಿದ್ದಾರೆ.

ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Read Also : ಮಾಜಿ ಪತಿಯ 30 ಸಾವಿರ ಕೋಟಿ ಆಸ್ತಿಯಲ್ಲಿ ಪಾಲು ಕೇಳಿದ ಕರೀಷ್ಮಾ!

Share.
Leave A Reply