Site icon BosstvKannada

ದಸರಾ ಉದ್ಘಾಟನೆ : ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ದಸರಾಗೆ ದಿನಗಣನೆ ಶುರುವಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲಾಗಿದೆ.

ಹಾಸನದ ಅಮಿರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್ ಅವರ ನಿವಾಸಕ್ಕೆ ದಸರಾ ವಿಶೇಷಧಿಕಾರಿ ಆಗಿರುವ ಮೈಸೂರು ಡಿಸಿ ಲಕ್ಷ್ಮಿಕಾಂತರೆಡ್ಡಿ ಹಾಗೂ ಎಡಿಸಿ ಶಿವರಾಜ್ ಅವರು ತೆರಳಿದ್ದರು. ಶಾಲು ಹೊದಿಸಿ, ಹಾರ ಹಾಕಿ, ಮೈಸೂರು ಪೇಟ ತೊಡಿಸಿ, ಆನೆ ವಿಗ್ರಹದ ಜೊತೆ ಆಹ್ವಾನ ಪತ್ರಿಕೆ ನೀಡಿ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

ಆಹ್ವಾನ ಸ್ವೀಕರಿಸಿ ಮಾತನಾಡಿದ ಬಾನು ಮುಷ್ತಾಕ್ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು. 2025ರ ದಸರಾ ಉದ್ಘಾಟನೆ ಸಂದರ್ಭದಲ್ಲಿ ಸಮಸ್ತ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸಿದ್ದರಾಮಯ್ಯ ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನನ್ನು ಸ್ವಾಗತ ಮಾಡಿದ ಮೈಸೂರು ಜಿಲ್ಲಾಡಳಿತಕ್ಕೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇನ್ನೂ ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದಿದ್ದಾರೆ.

Exit mobile version