ಬಿಜೆಪಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ , ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದು ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ್ರು.
ಬಾನು ಮುಷ್ತಾಕ್ ಆಯ್ಕೆಗೆ ಇಸ್ಮಾಯಿಲ್ ಕಥೆ
ಬಿಜೆಪಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಆಗ ಆರ್. ಎಸ್. ಎಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು? 2017 ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಆಗ ಇವರೆಲ್ಲ ಎಲ್ಲಿ ಹೋಗಿದ್ದರು? ಬಾನು ಅವರು ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ , ಪ್ರೀತಿ ಇಲ್ಲದೆ ಬರೆಯಲು ಸಾಧ್ಯವೇ ಎಂದು ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿವಾದದ ಕುರಿತು ಬಿಜೆಪಿ ಆರೋಪಗಳಿಗೆ ಕೌಂಟರ್ ಕೊಟ್ಟರು.
ದಸರಾ ಉದ್ಘಾಟಕರನ್ನು ಹಿಂದೂಗಳಾಗಿ ಎನ್ನುವುದು ತರವಲ್ಲ
ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ , ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದು ತಿಳಿಸಿದರು.
Read Also : ಬಿಜೆಪಿಯವರು ಸೌಜನ್ಯ ಪರನಾ? ವೀರೇಂದ್ರ ಹೆಗ್ಗಡೆ ಪರನಾ..? ಬಿಜೆಪಿಗೆ ಸಿದ್ದರಾಮಯ್ಯ ಕೌಂಟರ್!

