ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಒಡೆತನದ ಕಾಲೇಜಿನ ಮೇಲೆ ED ದಿಢೀರ್‌ನೆ ದಾಳಿ ನಡೆಸಿದೆ. ಗೃಹ ಸಚಿವರ ಒಡೆತನದ ಸಿದ್ಧಾರ್ಥ​ ಶಿಕ್ಷಣ ಸಂಸ್ಥೆಗಳಿಗೆ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಎಸ್​ಎಸ್​ಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Also Read: Karave Narayana Gowda: ಕನ್ನಡ ಮಾತಾಡಲ್ಲ, ಹಿಂದಿಯಷ್ಟೇ ಎಂದ ಬ್ಯಾಂಕ್‌ ಮ್ಯಾನೇಜರ್‌ಗೆ ಕರವೇ ಖಡಕ್‌ ವಾರ್ನಿಂಗ್‌!

ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರನ್ಯಾರಾವ್‌ ಈ ಶಿಕ್ಷಣ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ವಿದೇಶದಿಂದ ಅಕ್ರಮವಾಗಿ ಬಂಗಾರ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ಹಾಗೂ ಮೆಡಿಕಲ್ ಕಾಲೇಜಿನ ಮಧ್ಯೆ ಹಣ ವರ್ಗಾವಣೆ ನಡೆದಿದೆ ಅಂತಾ ಹೇಳಲಾಗ್ತಿದೆ. ಈ ಹಿನ್ನೆಲೆ ED ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಲೇಜಿನ ಹಣದ ವ್ಯವಹಾರದ ಕುರಿತು ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ..

Share.
Leave A Reply