Site icon BosstvKannada

ʼಕೈʼ ಶಾಸಕ ಸುಬ್ಬಾರೆಡ್ಡಿಗೆ ಸೇರಿ ಬೆಂಗಳೂರಿನ 5 ಕಡೆ ED ದಾಳಿ!

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ  ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.  ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಸುಬ್ಬಾರೆಡ್ಡಿ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿದೇಶದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ.  

ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಸಂಬಂಧ ದಾಳಿ ನಡೆದಿದೆ ಎನ್ನಲಾಗಿದೆ. ವಿದೇಶಗಳಲ್ಲಿನ ಬ್ಯಾಂಕ್​ ಅಕೌಂಟ್​​, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ.

Exit mobile version