BosstvKannada

ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರಾದ ಶ್ರೀ ಸಂತೋಷ್‌ ಎಸ್‌ ಲಾಡ್‌ ಅವರು, ವಿಕಾಸ ಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಮಾಲೋಚನೆ ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ರೋಹಿಣಿ ಸಿಂಧೂರಿ ದಾಸರಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಡಿ, ಕಾರ್ಖಾನೆಗಳು ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀ ಶ್ರೀನಿವಾಸ್, ಮಂಡಳಿಯ ಜಂಟಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ಉಮೇಶ್, ಕನ್ಸಲ್ಟೆಂಟ್ ಮುಖ್ಯಸ್ಥರು ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Read Also : ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

Exit mobile version