ಇನ್ನೂ ವರದಕ್ಷಿಣ ಕಿರುಕುಳ ಅಂತ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಸ್ ನಾರಾಯಣ್ ಅವರು, ರೆಗ್ಯೂಲರ್ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ. ಬೇರೆ ಇನ್ನೇನಾದ್ರೂ ಸಿಗುತ್ತಾ? ಅವರು ಮನೆ ಬಿಟ್ಟು ಹೋಗಿ ಒಂದು ವರ್ಷ ಆಯ್ತು. ಈಗ ದೂರು ಕೊಟ್ಟಿದ್ದಾರೆ. ಅವರಿಗೆ ಸುಃಖ, ಸಂತೋಷ ಎಲ್ಲಿ ಸಿಗುತ್ತೋ ಅಲ್ಲಿಗೆ ಹೋಗಿದ್ದಾರೆ. ನನ್ನ ವ್ಯಕ್ತಿತ್ವ ಎಲ್ಲರಿಗೂ ಗೊತ್ತು, ನಾವು ಸದಾ ಹೆಣ್ಮಕ್ಕಳನ್ನ ಗೌರವರಿಂದ ಕಾಣುವಂತಹವರು ಅಂತ ತಿಳಿಸಿದ್ದಾರೆ.
ನಾವೇನೋ ಹಿಂಸೆ ಕೊಟ್ಟಿದ್ದೇವೆ ಅಂತ ದೂರು ಕೊಟ್ಟಿದ್ದಾರೆ. ಅದು ಕೋರ್ಟಿಗೆ ಹೋಗಿದೆ. ನಾವು ಅದರ ಬಗ್ಗೆ ಹೇಳಿದ್ರೆ ಅವರಿಗೇ ಅವಮಾನ ಮಾಡಿದಂತೆ ಆಗುತ್ತೆ. ಪಾಪ ಹೆಣ್ಮಗು ಅಲ್ವಾ? ಅವರಿಗೆ ತೇಜೋವಧೆ ಮಾಡಬಾರದು ಅಂತ ಸೊಸೆ ಕೊಟ್ಟ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೂರಿನಲ್ಲಿ ಏನಿದೆ?
ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.
ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.
Read Also : ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ, FIR ದಾಖಲು

