ಟೀಂ ಇಂಡಿಯಾದ ಮತ್ತೊಬ್ಬ ಆಟಗಾರ ಅಮಿತ್ ಮಿಶ್ರಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಮಿತ್ ಮಿಶ್ರಾ, ನನ್ನ ಕ್ರಿಕೆಟ್ ಜೀವನದ ಈ 25 ವರ್ಷಗಳು ಸ್ಮರಣೀಯ. ಇಷ್ಟು ದಿನ ನನ್ನೊಂದಿಗಿದ್ದ ಬಿಸಿಸಿಐ, ಹರಿಯಾಣ ಕ್ರಿಕೆಟ್ ಸಂಘ, ಸಹಾಯಕ ಸಿಬ್ಬಂದಿ, ನನ್ನ ಸಹೋದ್ಯೋಗಿಗಳು ಮತ್ತು ನನ್ನ ಕುಟುಂಬ ಸದಸ್ಯರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಷ್ಟು ವರ್ಷಗಳ ಸ್ಮರಣೀಯ ನೆನಪುಗಳೊಂದಿಗೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿರುವುದಾಗಿ ಅಮಿತ್ ಮಿಶ್ರಾ ತಿಳಿಸಿದ್ದಾರೆ.

ಇನ್ನು, ಅಮಿತ್ ಮಿಶ್ರಾ ಭಾರತ ತಂಡದ ಪರವಾಗಿ 22 ಟೆಸ್ಟ್, 36 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನಾಡಿದ್ದಾರೆ. ತಮ್ಮ ಸ್ಪಿನ್ ಮೋಡಿಯಿಂದಾಗಿ 156 ವಿಕೆಟ್ಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಭಾರತದ ಪರವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 150ಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅಮಿತ್ ಮಿಶ್ರಾ ಸ್ಥಾನ ಪಡೆದಿದ್ದಾರೆ. ಇತ್ತೀಚೆಗಷ್ಟೇ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್, ಚೇತೇಶ್ವರ್ ಪೂಜಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ರು.
Read Also : ಶ್ರೀಶಾಂತ್‌ಗೆ ಕಪಾಳಮೋಕ್ಷ.. ಹರ್ಭಜನ್ ಸಿಂಗ್ ಕಳವಳ!
