ದೇಶದಲ್ಲಿ ಸದ್ಯ ದೇಶೀಯ ಕ್ರಿಕೆಟ್ ಪಂದ್ಯಗಳು ಕೂಡ ನಡೆಯುತ್ತಿದ್ದು, ಹಲವಾರು ಹಿರಿಯ ಆಟಗಾರರು ಕೂಡ ಭಾಗವಹಿಸಿದ್ದಾರೆ.

ಹೀಗಾಗಿಯೇ ಸದ್ಯ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 (Syed Mushtaq Ali T20) ಟ್ರೋಫಿಗೆ ಕ್ರೇಜ್ ಹೆಚ್ಚಿದೆ. ಆದರೆ, ಈಗ ಹಿರಿಯ ಆಟಗಾರನಿಗಾಗಿ ಮೈದಾನವೇ ಬದಲಾಗಿದ್ದು, ಎಲ್ಲರೂ ಹುಬ್ಬೇರಿಸುತ್ತಿದ್ದಾರೆ.

ರಾಷ್ಟ್ರೀಯ ತಂಡದಿಂದ ಹೊರಗೆ ಇರುವ ಬಹುತೇಕ ಹಿರಿಯ ಆಟಗಾರರು ಮೈದಾನಕ್ಕೆ ಧುಮುಕಿದ್ದಾರೆ. ಹೀಗಾಗಿ ಅಭಿಮಾನಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೈದಾನಕ್ಕೆ ಬರುತ್ತಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬರೋಡಾ ಹಾಗೂ ಗುಜರಾತ್ ನಡುವಿನ ಪಂದ್ಯ ಹೈದರಾಬಾದ್ನ ಜಿಮ್ಖಾನಾ ಮೈದಾನದಲ್ಲಿ ನಡೆಯಬೇಕಿತ್ತು. ಈ ಪಂದ್ಯದಲ್ಲಿ ಬರೋಡಾ ಪರ ಹಾರ್ದಿಕ್ ಪಾಂಡ್ಯ ಆಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು.

ಈ ಪಂದ್ಯವನ್ನು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಯಿತು. ಹಾರ್ದಿಕ್ ಮೈದಾನದಲ್ಲಿದ್ದಾಗ ಅಭಿಮಾನಿಗಳು ಒಳಗೆ ಬಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ಆಯೋಜಕರು ಪಂದ್ಯವನ್ನು ಸ್ಥಳಾಂತರ ಮಾಡಿದ್ದರು ಎನ್ನಲಾಗಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಉತ್ತಮ ಬೌಲಿಂಗ್ ಮಾಡಿದ್ದಾರೆ. ಅಲ್ಲದೇ, ಬರೋಡಾ 8 ವಿಕೆಟ್ ಗಳಿಂದ ಗೆದ್ದಿದೆ.

Share.
Leave A Reply