ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಮೂಲಕ ನಟ ಮಡೆನೂರು ಮನು ಜನಪ್ರಿಯತೆ ಪಡೆದುಕೊಂಡಿದ್ದರು. ಕಿರುತೆರೆ ನಟಿಯೊಬ್ಬರು ಮಡೆನೂರು ಮನು ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾರೆ. ಈ ಕುರಿತು ಮನು ವಿರುದ್ಧ ಸಹನಟಿ ಪ್ರಕರಣ ದಾಖಲಿಸಿದ್ದಾರೆ. ಕೇಸ್ ದಾಖಲಾಗುತ್ತಿದ್ದಂತೆ ಮಡೆನೂರು ಮನು ನಾಪತ್ತೆಯಾಗಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಮನು ವಿರುದ್ಧ ಗಂಭೀರ ಆರೋಪಿಸಿ ಕೇಸ್ ದಾಖಲಿಸಿಲಾಗಿದೆ(fir).
Also Read: Pruthvi Ambaar : ಹಿಂದೆಂದೂ ಕಾಣದ ಅವತಾರದಲ್ಲಿ ಪೃಥ್ವಿ ಅಂಬಾರ್ ಅಬ್ಬರ..!
ಇನ್ನು ಈ ಸಂಬಂಧ ಕಿರುತೆರೆ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇನ್ನೂ, ನಿರ್ದೇಶಕ ಯೋಗರಾಜ್ ಭಟ್ ಅವರ ಬ್ಯಾನರ್ನಲ್ಲಿ ಮೂಡಿಬಂದ ಸಿನಿಮಾದಲ್ಲಿ ನಟ ಮಡೆನೂರು ಮನು ನಟಿಸಿದ್ದಾರೆ. ಈ ಕುಲದಲ್ಲಿ ಕೀಳ್ಯಾವೋದು ಸಿನಿಮಾ ನಾಳೆ ರಿಲೀಸ್ ಆಗಬೇಕಿದೆ. ಆದ್ರೆ ಇದರ ಮಧ್ಯೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ನಟ ಮನುಗಾಗಿ ಹುಡಕಾಟ ಶುರು ಮಾಡಿದ್ದಾರೆ.
