ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ (Kohli’s One8 Commune Pub) ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೊಟ್ಟಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.




ಪ್ರತ್ಯೇಕ ಸ್ಥಳ ಮೀಸಲಿಡದೆ ಧೂ*ಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಕೇಸ್ ದಾಖಲಿಸಲಾಗಿದೆ. ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 29ರಂದು ಪೊಲೀಸರು ರೇಡ್ ಮಾಡಿ NCR ದಾಖಲಿಸಿಕೊಂಡಿದ್ದರು. ನ್ಯಾಯಾಲಯದಿಂದ ಅನುಮತಿಯನ್ನು ಪಡೆದು ಈಗ ಪ್ರಕರಣ ದಾಖಲಿಸಿದ್ದಾರೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾ ದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ (COTPA Act) ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಅನುಮತಿ ನೀಡಿರುವ ಅವಧಿ ಮೀರಿ ಪಬ್ ನಡೆಸುತ್ತಿರೋ ಬಗ್ಗೆ ಕೇಸ್ ಆಗಿತ್ತು. ಕಳೆದ ವರ್ಷ ಜುಲೈನಲ್ಲಿ ಪ್ರಕರಣ ದಾಖಲು ಮಾಡಿದ್ದ ಪೊಲೀಸರು, ಈಗ ಮತ್ತೆ ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿದ್ದಾರೆ..
