ಹೈದರಾಬಾದ್‌ನ ಹೃದಯಭಾಗದಲ್ಲಿರುವ ಐತಿಹಾಸಿಕ ಚಾರ್ಮಿನಾರ್ (Charminar) ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ (Fire Accident in Hyderabad) ಈವರೆಗೆ 17 ಜನರು ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Charminar: ಶ್ರೀಕೃಷ್ಣ ಪರ್ಲ್ಸ್ ಕಟ್ಟಡದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ದುರಂತ ಸಂಭವಿಸಿದ ತಕ್ಷಣ ಘಟನಾ ಸ್ಥಳಕ್ಕೆ ಹನ್ನೊಂದು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಸಹಾಯ ಮಾಡಿದವು. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಇನ್ನೊಂದೆಡೆ, ಘಟನೆಯ ಸಿಎಂಟಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬೆಂಕಿಯ ತೀವ್ರತೆಗೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು, “ತ್ವರಿತ ಕಾರ್ಯಾಚರಣೆಯನ್ನ ನಡೆಸುತ್ತಿದ್ದೇವೆ, ಆದರೆ ಇಂತಹ ಹಳೆಯ ಕಟ್ಟಡಗಳಲ್ಲಿ ಅಗ್ನಿಸುರಕ್ಷಾ ಕ್ರಮಗಳು ತುಂಬಾ ಅಸಮರ್ಪಕವಾಗಿದೆ ಎಂದು ಹೇಳಿದ್ದಾರೆ.

Also Read: ಭಕ್ತಿಯೇ ಅದ್ಭುತ ಶಕ್ತಿ – ಪಾದಯಾತ್ರೆಯಿಂದ Kedarnath ತಲುಪಿದ ಕಲಬುರಗಿಯ ವೃದ್ಧ

ಸದ್ಯಕ್ಕೆ ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ವ್ಯಾಪಾರಸ್ಥರು ಹಾಗೂ ಸ್ಥಳೀಯರು ಶಾಶ್ವತ ಪರಿಹಾರಕ್ಕಾಗಿ ಮನವಿ ಮಾಡುತ್ತಿದ್ದಾರೆ. ಆದ್ರೆ ಈ ಅವಘಡದಲ್ಲಿ 17 ಜನರು ಸಜೀವ ದಹನರಾಗಿದ್ದು ಮಾತ್ರ ದುರಂತವೇ ಸರಿ..

Share.
Leave A Reply