ಬೆಂಗಳೂರು: ಶಾಲಾ ಮಕ್ಕಳಿಗೆ (School Students) ಭಗವದ್ಗೀತೆ (Bhagavad Gita) ಬೋಧಿಸುವಂತೆ ಕೇಂದ್ರ ಸಚಿವ (Union Minister) ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ಕುರಿತು ಕೇಂದ್ರ ಶಿಕ್ಷಣ ಸಚಿವ (Union Education Minister) ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಭಾರತೀಯ ಪರಂಪರೆಯ ಧರ್ಮಗ್ರಂಥವಾಗಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಕಲಿಸಬೇಕು. ಹೀಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ ಎಂದ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಮ್ಮ ಯುವ ಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ. ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮಲಕನಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ. ಎಂದು ನಾನು ಬಲವಾಗಿ ನಂಬಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

