ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊನೆಯುಸಿರೆಳೆದಿದ್ದಾರೆ.

ಹಲವು ರಾಜ್ಯಗಳ ರಾಜ್ಯಪಾಲರಾಗಿ ಸೇವೆ

ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿಯೇ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು ಆಗಸ್ಟ್ 5, 2019 ರಂದು ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು.

ಸುದೀರ್ಘ ರಾಜಕೀಯ ಜೀವನ ಮತ್ತು ನೇರ ನಿಲುವುಗಳಿಗೆ ಹೆಸರುವಾಸಿಯಾದ ಮಲಿಕ್, ಜಮ್ಮು ಮತ್ತು ಕಾಶ್ಮೀರ, ಗೋವಾ, ಬಿಹಾರ, ಒಡಿಶಾ ಮತ್ತು ಮೇಘಾಲಯ ಸೇರಿದಂತೆ ಹಲವಾರು ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

Share.
Leave A Reply