ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರು ನಿಧನರಾಗಿದ್ದಾರೆ. ವೆಲಿಕ್ಕಕತು ಶಂಕರನ್ ಅಚ್ಯುತಾನಂದನ್‌ರನ್ನು ವಿಎಸ್ ಎಂದೇ ಖ್ಯಾತ ರಾಜಕೀಯ ವ್ಯಕ್ತಿಯಾಗಿದ್ದರು. ಜು. 21ರಂದು ಮಧ್ಯಾಹ್ನ 3.20ಕ್ಕೆ ತಿರುವನಂತಪುರದ ಎಸ್‌ಯುಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. 2019 ರಲ್ಲಿ ಪಾರ್ಶ್ವವಾಯುವಿಗೆ ಒಳಗಾದ ಅವರಿಗೆ ಅನಾರೋಗ್ಯ ತೀರಾ ಹದಗೆಟ್ಟಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1964 ರಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ವನ್ನು ತೊರೆದು ಸಿಪಿಐ (ಎಂ) ಸ್ಥಾಪಿಸಿದ 32 ಜನರಲ್ಲಿ ಉಳಿದಿರುವ ಏಕೈಕ ನಾಯಕ ವಿಎಸ್.. ರಾಜ್ಯ ವಿಧಾನಸಭೆಯಲ್ಲಿ ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿದ್ರು.. ವಿಎಸ್, ಸಿಪಿಐ (ಎಂ) ನ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2021 ರವರೆಗೆ ವಿಧಾನಸಭೆಯ ಸದಸ್ಯರಾಗಿದ್ದರು. 2006ರ ಮೇ 18 ರಂದು ಮುಖ್ಯಮಂತ್ರಿಯಾಗಿ ಆಯ್ಕೆಯಾದ್ರು.. 2011ರ ಮೇ 14ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 82 ನೇ ವಯಸ್ಸಿನಲ್ಲಿ ಕೇರಳದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಇದೆ.

