ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ. ಟೆಸ್ಟ್, ಏಕದಿನ ವಿಶ್ವಕಪ್ ಮೇಲೆ ಗಮನ ಹರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್ ಯಾವಾಗಲೂ ನನ್ನ ಅತ್ಯುನ್ನತ ಆದ್ಯತೆ, ನಾನು ಆಸ್ಟ್ರೇಲಿಯಾ ಪರ ಆಡಿರುವ ಪ್ರತಿಯೊಂದು ಟಿ20 ಪಂದ್ಯದ ಪ್ರತಿ ನಿಮಿಷವನ್ನು, ವಿಶೇಷವಾಗಿ 2021 ರ ವಿಶ್ವಕಪ್‌ಅನ್ನು ಪ್ರೀತಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಭಾರತ ಟೆಸ್ಟ್ ಪ್ರವಾಸ, 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಎದುರು ನೋಡುತ್ತಿರುವ ನಾನು, ಆಟದಲ್ಲಿ ತಾಜಾತನ, ಫಿಟ್ ನೆಸ್ ಕಾಯ್ದುಕೊಳ್ಳಲು ಮತ್ತು ಉತ್ತಮ ಆಟ ನೀಡಲು ನನ್ನ ಅತ್ಯುತ್ತಮ ಮಾರ್ಗ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ. ಸ್ಟಾರ್ಕ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 79 ವಿಕೆಟ್‌ಗಳನ್ನು ಗಳಿಸುವ ಮೂಲಕ ಆಡಮ್ ಜಂಪಾ ನಂತರ ಆಸ್ಟ್ರೇಲಿಯಾ ಪರ ಎರಡನೇ ಅತ್ಯಧಿಕ ವಿಕೆಟ್‌ಗಳನ್ನು ಗಳಿಸಿದ್ದಾರೆ.
Read Also : ಕೊನೆಗೂ ಆರ್‌ಸಿಬಿ ಪೋಸ್ಟ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!
2012 ರಲ್ಲಿ ಪಾಕಿಸ್ತಾನ ವಿರುದ್ಧ ತಮ್ಮ ಮೊದಲ ಪಂದ್ಯ ಆಡಿದರು. 65 ಪಂದ್ಯಗಳ ವೃತ್ತಿಜೀವನದಲ್ಲಿ ಅವರು 7.74 ರ ಎಕಾನಮಿಯಲ್ಲಿ 79 ವಿಕೆಟ್‌ಗಳನ್ನು ಕಿತ್ತಿದ್ದಾರೆ. ಐದು ಟಿ20 ವಿಶ್ವಕಪ್ ಆಡಿದ್ದಾರೆ. ಗಾಯದಿಂದಾಗಿ 2016 ರ ಆವೃತ್ತಿಯನ್ನು ಮಾತ್ರ ಕಳೆದುಕೊಂಡಿದ್ದರು. 2021 ರಲ್ಲಿ ದುಬೈನಲ್ಲಿ ಆಸ್ಟ್ರೇಲಿಯಾ ಪ್ರಶಸ್ತಿ ಗೆಲ್ಲುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರ ವಹಿಸಿದ್ದರು.
